ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು: ಕುಂಟಾಡಿಯಲ್ಲಿ ವೈದ್ಯಕೀಯ ಶಿಬಿರ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು ಇದರ ಕಾರ್ಕಳ ಶಾಖೆಯ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ ಡಿಸೆಂಬರ್ 21ರಂದು ಜರುಗಿತು.
ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ ಜೈರಾಜ್ ಬಿ ರೈ ಯವರು ದೈವಸ್ಥಾನ ಪ್ರಗತಿಯಲ್ಲಿ ವಾಣಿಜ್ಯ ಅಭಿವೃದ್ಧಿಯು ಅಗತ್ಯ. ಹಣಕಾಸು ವ್ಯವಹಾರ ಪ್ರಗತಿಯಾದಂತೆ ಕ್ಷೇತ್ರದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು. ಹಣಕಾಸು ಸೇವೆ ಹಾಗೂ ಸಾಮಾಜಿಕ ಕಾರ್ಯಗಳ ಉಪಯೋಗವನ್ನು ಊರ ಜನತೆ ಪಡೆದುಕೊಳ್ಳುವಂತೆ ಕೋರಿದರು.
ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರಿ ಪೂಜಾ ಉದ್ಘಾಟನೆಯನ್ನು ನೆರವೇರಿಸಿ, ಜನರು ತಮ್ಮ ಆರೋಗ್ಯದ ಕಾಳಜಿಯನ್ನು ತಾವೇ ವಹಿಸಿಕೊಳ್ಳುವಂತಾಗಬೇಕು. ಮಾತ್ರವಲ್ಲದೆ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಿದಲ್ಲಿ ದೈಹಿಕ ಉತ್ತಮ ಬೆಳವಣಿಗೆ ಸಾಧ್ಯ ಎಂದರು.
ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ತೀರ್ಥಬೆಟ್ಟುಗುತ್ತು ಕೆ ಪ್ರಥ್ವಿರಾಜ್ ಬಿ ರೈ ಸಾಂದರ್ಭಿಕವಾಗಿ ಮಾತನಾಡಿದರು.
ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಅರುಣ ಜನರಿಗೆ ಆರೋಗ್ಯ ಕಾಳಜಿ ಅಗತ್ಯ. ಆರೋಗ್ಯದ ವ್ಯತ್ಯಾಸಗಳು ಕಂಡು ಬಂದಲ್ಲಿ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸುವಂತೆ ಕೋರಿದರು. ಬೆರ್ಮನಬೆಟ್ಟು ಬರ್ಕೆ ಗಡಿ ಪ್ರಧಾನರು ಚಂದಯ್ಯ ಬೋಂಟ್ರ, ಉಡುಪಿ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ನೇತ್ರಾಧಿಕಾರಿ ಪ್ರವೀಣ್ ಎಂ ಕೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಹಾಗೂ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಡಾ. ಕ್ರೀನ, ಕಾರ್ಕಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎನ್‌ಸಿಡಿ ಘಟಕದ ಡಾ. ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ ಶಾಖಾಧಿಕಾರಿ ನವೀನ್ ಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಪ್ರಜ್ಞ ಆಚಾರ್ಯ, ಕೃತಿಕ, ಸಿಂಚನ ಪ್ರಾರ್ಥನೆಗೈದರು. ಶಾಖಾಧಿಕಾರಿ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಶಾಖಾ ಸಿಬ್ಬಂದಿ ರಂಜಿತ್ ಶೆಟ್ಟಿ ಧನ್ಯವಾದವಿತ್ತರು. ಪತ್ರಕರ್ತ ನವೀನ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು 103 ಮಂದಿ ಗ್ರಾಮಸ್ಥರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಉಡುಪಿ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ನೇತ್ರ ಜ್ಯೋತಿ ಚಾರಿ ಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಎನ್ ಸಿ ಡಿ ಘಟಕ, ಕುಂಟಾಡಿ ಶ್ರೀ ರಕ್ತೇಶ್ವರಿ ದೈವಸ್ಥಾನ ಆಡಳಿತ ಮಂಡಳಿ ಸಹಯೋಗ ನೀಡಿ ಸಹಕರಿಸಿದರು.