ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.,
ಮಂಗಳೂರಿಗೆ ಪ್ರತಿಷ್ಠಿತ “ಸಹಕಾರ ಮಾಣಿಕ್ಯ” ಪ್ರಶಸ್ತಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಸಹಕಾರ ಸಂಘಗಳ ಸಹಯೋಗದಲ್ಲಿ ದಿನಾಂಕ 16.11.2024 ಶನಿವಾರದಂದು ಮಂಗಳೂರಿನಲ್ಲಿ ಜರಗಿದ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ಅನುಷ್ಟಾನಿಸಲಾದ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ ಅತ್ಯುತ್ತಮ ಕ್ರೆಡಿಟ್ ಸಹಕಾರ ಸಂಘಕ್ಕೆ ನೀಡಲಾಗುವ “ಸಹಕಾರ ಮಾಣಿಕ್ಯ” ಪ್ರಶಸ್ತಿಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು ತನ್ನ ಮುಡಿಗೇರಿಸಿಕೊಂಡಿದೆ.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್ ಫರೀದ್ರವರು, ಕರ್ನಾಟಕ ಸರಕಾರ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎನ್. ರಾಜಣ್ಣ, ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್, ಕರ್ನಾಟಕ ಸರಕಾರ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ, ಕರ್ನಾಟಕ ಸರಕಾರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಟಿ ದೇವೇಗೌಡ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಇದರ ಅಧ್ಯಕ್ಷರಾದ ಸನ್ಮಾನ್ಯ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಭರತ್ ಶೆಟ್ಟಿ, ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷರಾದ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು ಹಾಗೂ ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ “ಸಹಕಾರ ಮಾಣಿಕ್ಯ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಹಿಂದಿನ ವರ್ಷಗಳಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಗೆ 6 ಬಾರಿ ರಾಜ್ಯಮಟ್ಟದ ಹಾಗೂ 13 ಬಾರಿ ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯು ಲಭಿಸಿದ್ದು, ಇದೀಗ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ “ಸಹಕಾರ ಮಾಣಿಕ್ಯ” ಪ್ರಶಸ್ತಿ ಪಡೆದ ಪ್ರಪ್ರಥಮ ಹಾಗೂ ಏಕೈಕ ಕ್ರೆಡಿಟ್ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಸಂಘವು ಪಾತ್ರವಾಗಿದೆ.